HELLO FRIENDS
ಸ್ಪರ್ಧಾ ಶಂಕರ ಬ್ಲೊಗ್ ಸ್ಪೊಟ್ ಜಾಲತಾಣಕ್ಕೆ ಎಲ್ಲರಿಗೂ ಸುಸ್ವಾಗತ
ಪ್ರಿಯ ಮಿತ್ರರೇ , ಶುಭ ಸುದ್ದಿ.............!
ಕೆಪಿಎಸ್ಸಿ ಹಾಗು ಯುಪಿಎಸ್ಸಿ ಇನ್ನಿತರ ಸ್ಪರ್ಧಾತ್ಮಕ ಹುದ್ದೆಗಳಿಗಾಗಿ ಉಚಿತ ತರಬೇತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅನ್ ಲೈನ್ ಮುಲಕ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಲಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮುಂದೆ ಒದಿ....!
೨೦೨೦-೨೧ ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರಿಕ್ಷ ಪೂರ್ವ ತರಬೇತಿ ಕೇಂರ್ದ್ರತ್ದಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಪುರ್ವ ಭಾವಿ ಉಚಿತ ತರಬೇತಿಗಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿಧ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸಮಾಜ ಕಲ್ಯಾಣ ಇಲಾಖೆಯು, 2020-21ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳನ್ನು ಆನ್ ಲೈನ್, ಆಫ್ ಲೈನ್ ಮೂಲಕ ಯುಪಿಎಸ್ಸಿ, ಕೆಎಎಸ್, ಗ್ರೂಪ್-ಸಿ, ಬ್ಯಾಂಕಿಂಗ್, ಎಸ್ ಎಸ್ ಸಿ ಮತ್ತು ಆರ್ ಆರ್ ಬಿ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಯುಪಿಎಸ್ಸಿ, ಕೆಎಎಸ್, ಗ್ರೂಪ್-ಸಿ, ಬ್ಯಾಂಕಿಂಗ್, ಎಸ್ ಎಸ್ ಸಿ ಮತ್ತು ಆರ್ ಆರ್ ಬಿ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳನ್ನು ಕೋವಿಡ್-19 ಹಿನ್ನಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ, ಆಯ್ಕೆ ಮಾಡಲು ಸಾಧ್ಯವಾಗದ ಕಾರಣ, ಪದವಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಗೆ ಶಿಷ್ಯವೇತನವನ್ನು ಸರ್ಕಾರದಿಂದ ಮಂಜೂರಾದ ದರದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಹಾಜರಾತಿಯನ್ವಯ ವರ್ಗಾಯಿಸಲಾಗುವುದು.
ಇಂತಹ ಯುಪಿಎಸ್ಸಿ, ಕೆಎಎಸ್, ಗ್ರೂಪ್-ಸಿ, ಬ್ಯಾಂಕಿಂಗ್, ಎಸ್ ಎಸ್ ಸಿ ಮತ್ತು ಆರ್ ಆರ್ ಬಿ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಬಯಸುವಂತ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳು ದಿನಾಂಕ 31 12-2020ರ ಸಂಜೆ 5.30ರ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಿದೆ.
APPLY ONLINE :--OPEN WEBSITE